ಬೆಂಗಳೂರು: ತಾತ್ಕಾಲಿಕ ಅಥವಾ ಸಾಂದರ್ಭಿಕ ಸನ್ನದು (ಸಿಎಲ್-5) ಪಡೆಯುವವರಿಗೆ ಮದ್ಯ ಖರೀದಿಸಲು ಇದ್ದ ನಿರ್ಬಂಧಗಳನ್ನು ಸಡಿಲಗೊಳಿಸಲು ಅಬಕಾರಿ ಇಲಾಖೆ ಮುಂದಾಗಿದ್ದು, ಶೀಘ್ರದಲ್ಲಿ ಆದೇಶ ಪ್ರಕಟಿಸಲಿದೆ. ಅಬಕಾರಿ ಕಾಯಿದೆಗೆ ತಿದ್ದುಪಡಿ ತಂದು ಕೆಎಸ್ಬಿಸಿಎಲ್ ಡಿಪೋಗಳಲ್ಲಿ ಮಾತ್ರವಲ್ಲದೆ ಇತರೆ ಮದ್ಯ ಮಳಿಗೆಗಳಲ್ಲೂ ಮದ್ಯ ಖರೀದಿಗೆ ಅವಕಾಶ ನೀಡಲು ಏಪ್ರಿಲ್ನಲ್ಲಿ ಕರಡು ನಿಯಮಗಳನ್ನು ಪ್ರಕಟಿಸಿತ್ತು. ಮದ್ಯ ಮಾರಾಟಗಾರರ ಒಕ್ಕೂಟ ಸೇರಿದಂತೆ ಯಾರೂ ಸಹ ಕರಡು ನಿಯಮಕ್ಕೆ ಆಕ್ಷೇಪ ವ್ಯಕ್ತಪಡಿಸಿಲ್ಲ. ಹೀಗಾಗಿ ಸದ್ಯದಲ್ಲೇ ಅಂತಿಮ