ಬೆಂಗಳೂರು : 7ನೇ ತರಗತಿಯಲ್ಲಿ ಪಬ್ಲಿಕ್ ಪರೀಕ್ಷೆ ನಡೆಸುವುದಾಗಿ ಹೇಳಿ ವಿದ್ಯಾರ್ಥಿಗಳಿಗೆ ಶಾಕ್ ನೀಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸಚಿವ ಎಸ್ ಸುರೇಶ್ ಕುಮಾರ್ ಇದೀಗ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ 7ನೇ ತರಗತಿಯಲ್ಲಿ ಪಬ್ಲಿಕ್ ಪರೀಕ್ಷೆ ಮಾಡಿ ಮಕ್ಕಳ ಕಲಿಕೆಯ ಮೌಲ್ಯಮಾಪನ ಮಾಡಲಾಗುತ್ತದೆಯೇ ಹೊರತು ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವುದಿಲ್ಲ ಎಂಬುದಾಗಿ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಹಿಂದೆ 7ನೇ ತರಗತಿಯಲ್ಲಿ ನಡೆಯುತ್ತಿದ್ದ