ಬೆಂಗಳೂರು : ರಾಜ್ಯದಲ್ಲಿ ಮತದಾನ ಆರಂಭವಾಗಿದ್ದು ವಿಶೇಷವಾಗಿ ಬೆಂಗಳೂರಿನಲ್ಲಿ ಬೆಳಗ್ಗೆ ಜನರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ಪ್ರತಿಬಾರಿಯೂ ಬೆಂಗಳೂರು ನಗರದಲ್ಲಿ ಕಡಿಮೆ ಪ್ರಮಾಣದ ಮತದಾನ ದಾಖಲಾಗುತ್ತದೆ. ಹೀಗಾಗಿ ಈ ಬಾರಿ ರಾಜಕೀಯ ಪಕ್ಷಗಳು, ಚುನಾವಣಾ ಆಯೋಗ ಮತ ಪ್ರಮಾಣ ಹೆಚ್ಚಿಸಲು ಕಸರತ್ತು ಮಾಡಿತ್ತು. ಬೆಳಗ್ಗೆ 7 ಗಂಟೆಗೆ ಜನರು ಸರದಿ ನಿಂತು ವೋಟ್ ಹಾಕಿದ್ದಾರೆ. 2018ರ ಚುನಾವಣೆ ಮೇ 12 ಶನಿವಾರ ನಡೆದಿತ್ತು. ವೀಕೆಂಡ್ ಆದ ಹಿನ್ನೆಲೆಯಲ್ಲಿ