ಬೆಳಗಾವಿ : ಅಥಣಿ ಕ್ಷೇತ್ರದ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಹಾಗೂ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ರಾಜೀನಾಮೆ ನೀಡಿದ್ದು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಂಡಿತವಾಗಿಯೂ ತೀರ್ಮಾನ ಮಾಡಿದ್ದೇನೆ. ಭಿಕ್ಷೆ ಪಾತ್ರೆ ಇಟ್ಟುಕೊಂಡು ತಿರುಗುವನು ನಾನಲ್ಲ. ನಾನು ಸ್ವಾಭಿಮಾನಿ ರಾಜಕಾರಣಿ ಲಜ್ಜೆಗಟ್ಟ ರಾಜಕಾರಣಿ ಅಲ್ಲ. ಅಧಿಕಾರಿದ ಅಮಲಿನಲ್ಲಿ ನಾನಿಲ್ಲ. ಜಿಲ್ಲೆಯಲ್ಲಿ ಯಾರು ಬೆನ್ನಿಗೆ ಚೂರಿ ಹಾಕಿಲ್ಲ