ಕಾರವಾರ : ಚಿತ್ರದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ರವರು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಿದ ಗೂಳಿಹಟ್ಟಿ ಶೇಖರ್, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಕಚೇರಿಗೆ ತೆರಳಿ ರಾಜೀನಾಮೆ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, 2023ರ ಚುನಾವಣೆಗೆ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ.ಎಸ್ಸಿ ಜನಾಂಗದವನಾಗಿ ಜನರಲ್ನಲ್ಲಿ ಟಿಕೆಟ್ ಕೇಳಿರುವುದು ನನ್ನ ತಪ್ಪು. ಪಕ್ಷದಲ್ಲಿ ಸಾಮಾಜಿಕ ನ್ಯಾಯ ಮತ್ತು ತತ್ವ ಸಿದ್ಧಾಂತಗಳು