ಚೀನಾದಲ್ಲಿ ಮತ್ತೆ ಕೋವಿಡ್ ಸೋಂಕು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಕೂಡ ಹಲವುಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ. ಕಣ್ಗಾವಲಿಗೆ ವಿಶೇಷ ಸಮಿತಿ ರಚಿಸಿದ್ದು, ಒಂದಷ್ಟು ವಿಚಾರಗಳ ಕುರಿತು ಇಂದು ಚರ್ಚೆ ನಡೆಯಲಿದೆ. ವಿದೇಶ ಪ್ರಯಾಣಕ್ಕೆ ಸಂಬಂಧಿಸಿದಂತೆ ನಿರ್ಬಂಧ ಘೋಷಿಸುವ ಸಾಧ್ಯತೆ ಇದೆ ಹಾಗೆಯೇ ವಿದೇಶದಿಂದ ಬರುವವರಿಗೆ ಮತ್ತೆ ಒಂದಿಷ್ಟು ಶಿಷ್ಟಾಚಾರಗಳನ್ನು ಘೋಷಿಸುವ ಕುರಿತು ಚರ್ಚೆ ನಡೆಯಲಿದೆ ಎನ್ನಲಾಗಿದೆ. ಪರಿಶೀಲನಾ ಸಭೆಯಲ್ಲಿ ಪ್ರಾಥಮಿಕವಾಗಿ ಆರು ಪ್ರಮುಖ ಅಂಶಗಳ ಕುರಿತು ಚರ್ಚೆ