ಆ ಗ್ರಾಮಕ್ಕೆ ಹಲವು ದಶಕಗಳಿಂದ ಸರಕಾರಿ ಬಸ್ ಬಂದಿದ್ದಿಲ್ಲ. ಹೀಗಾಗಿ ಗ್ರಾಮಸ್ಥರ ಕೋರಿಕೆ ಸರಕಾರ ಸ್ಪಂದಿಸಿದೆ. ಸಾರಿಗೆ ಇಲಾಖೆ ಹಾಗೂ ಜನಪ್ರತಿನಿಧಿಗಳು ಮುತುವರ್ಜಿ ವಹಿಸಿ ಆ ಕುಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿದ್ದಾರೆ. ಅಂದಹಾಗೆ ಶಾಸಕರೇ ಸ್ವತಃ ಸರಕಾರಿ ಬಸ್ ಚಾಲನೆ ಮಾಡಿಕೊಂಡು ಚಲಾಯಿಸಿದ್ದು ವಿಶೇಷವಾಗಿತ್ತು. ಹರಿಹರದ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ ಸರಕಾರಿ ಬಸ್ ಚಾಲನೆ ಮಾಡಿ ಗಮನ ಸೆಳೆದಿದ್ದಾರೆ. ಕೆಲವು ವರ್ಷಗಳಿಂದ ನಾಗೇನಹಳ್ಳಿ ಗ್ರಾಮಕ್ಕೆ ಬಸ್ ಸೌಕರ್ಯ ಇರಲಿಲ್ಲ.ನಾಗೇನಹಳ್ಳಿ