ಹುಬ್ಬಳ್ಳಿ, (ಸೆ.1) : ಕೋವಿಡ್ ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ರಾತ್ರಿ ಕಫ್ರ್ಯೂ ತೆರವುಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಸ್ವಲ್ಪ ಪ್ರಮಾಣದ ಏರಿಕೆ ಇರುವುದರಿಂದ ರಾತ್ರಿ ಕಫ್ರ್ಯೂ ವಿಧಿಸಲಾಗಿದೆ. ಇದನ್ನು ಹಂತ ಹಂತವಾಗಿ ತೆರವುಗೊಳಿಸಲಾಗುವುದು ಎಂದು ತಿಳಿಸಿದರು. ಜನರ ಜೀವನಕ್ಕೂ ತೊಂದರೆಯಾಗಬಾರದು. ಕೋವಿಡ್ ನಿಯಂತ್ರಣಕ್ಕೂ