ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಬಿ.ಎಸ್.ಯಡಿಯೂರಪ್ಪ, ರಾಜ್ಯದ ಜನತೆಯ ಹಿತ ದೃಷ್ಟಿಯಿಂದ ರಾಜ್ಯ ಸರಕಾರ ಮಧ್ಯ ಪ್ರವೇಶಿಸಿ ಸಾರಿಗೆ ನೌಕರರ ಸಮಸ್ಯೆಗಳನ್ನು ಪರಿಹರಿಸಬೇಕು. ಸಾರಿಗೆ ನೌಕರರ ಸಂಘಟನೆ ಹಾಗೂ ಸರಕಾರ ಪರಸ್ಪರ ಮಾತುಕತೆ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು. ರಾಜ್ಯ ಸರಕಾರಕ್ಕೆ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವುದರ ಜೊತೆಗೆ ಸಾರ್ವಜನಿಕರ ಹಿತ ರಕ್ಷಣೆ ಮಾಡುವ ಜವಾಬ್ದಾರಿಯೂ ಇದೆ. ಸರಕಾರ ಹಾಗೂ ಸಾರಿಗೆ ನೌಕರರ ಸಂಘಟನೆಗಳು ಪರಸ್ಪರ