ಬೆಂಗಳೂರು : ಖಾಸಗಿ ಸಾರಿಗೆ ಒಕ್ಕೂಟಗಳ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ 5,500 ಕೋಟಿ ರೂ. ಬೇಕು. ಇದನ್ನು ಮಾಡಲು ಸಾಧ್ಯವೇ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರಶ್ನಿಸಿದ್ದಾರೆ. ಖಾಸಗಿ ಸಾರಿಗೆ ಒಕ್ಕೂಟ ಸೋಮವಾರ ಬೆಂಗಳೂರಿನಲ್ಲಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆ ನಗರದಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಒಕ್ಕೂಟ ಬೇಡಿಕೆ ಈಡೇರಿಸಲು 5,500 ಕೋಟಿ ರೂ. ಸರ್ಕಾರಕ್ಕೆ ಬೇಕಾಗುತ್ತದೆ. ಇದನ್ನು ಮಾಡೋಕೆ ಸಾಧ್ಯಾನಾ? ಖಾಸಗಿ ಸಾರಿಗೆಯವರ ಬೇಡಿಕೆಗಳಲ್ಲಿ 2