Widgets Magazine

ಸರಕಾರ ಯಾರನ್ನು ರಕ್ಷಿಸುವ ಕೆಲಸ ಮಾಡುತ್ತಿಲ್ಲ: ಸೀತಾರಾಮ್

ಕೊಡಗು| Vinod| Last Updated: ಮಂಗಳವಾರ, 12 ಜುಲೈ 2016 (16:13 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಯಾರನ್ನು ರಕ್ಷಿಸುವ ಕೆಲಸ ಮಾಡುತ್ತಿಲ್ಲ ಎಂದು ಕೊಡಗು ಜಿಲ್ಲಾ ಎಂ.ಆರ್.ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.

ಎಂ.ಕೆ.ಗಣಪತಿ ಕುಟುಂಬಸ್ಥರನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಿ ಸುದ್ದಿಗಾರರೊಂದಿಗೆ ಮಾತನಾಡಿದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಮನ್, ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರ ಯಾರನ್ನು ರಕ್ಷಿಸುವ ಪ್ರಯತ್ನ ಮಾಡುತ್ತಿಲ್ಲ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಆತ್ಮಹತ್ಯೆ ಪ್ರಕರಣ ನಡೆದಾಗಿನಿಂದ ರಾಜ್ಯದಲ್ಲಿ ಹಲವಾರು ಬೆಳವಣಿಗೆಗಳು ನಡೆಯುತ್ತಿವೆ ಎಂದು ತಿಳಿಸಿದರು.

ಎಂ.ಕೆ.ಗಣಪತಿಯವರು ನನ್ನ ಕ್ಷೇತ್ರದಲ್ಲಿ 3 ವರ್ಷ ಸೇವೆ ಸಲ್ಲಿಸಿದ್ದಾರೆ. ಅವರ ಸಾವು ನನಗೆ ವೈಯಕ್ತಿಕವಾಗಿ ನೋವು ತಂದಿದೆ. ಗಣಪತಿ ಕುಟುಂಬಸ್ಥರು ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಯಿಸುವಂತೆ ಒತ್ತಾಯಿಸುತ್ತಿದ್ದಾರೆ. ದಕ್ಷ ಅಧಿಕಾರಿ ಡಿ.ಕೆ. ರವಿ ಅವರ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ವರ್ಷ ಕಳೆದರು ವರದಿ ಬಂದಿಲ್ಲ ಎಂದು ಹೇಳಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್
ಡೌನ್‌ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :