ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಗಾಲದ ಬಗ್ಗೆ ಸರಕಾರಕ್ಕೆ ಕಿಂಚಿತ್ತು ಕಾಳಜಿಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ. ಕಲಬುರಗಿ ಜಿಲ್ಲೆಯ ಅಳಂದ ತಾಲೂಕಿನ ಜಿಡಗಾ ಗ್ರಾಮದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ ರಾಜ್ಯ ಸರಕಾರ ಬಜೆಟ್ನಲ್ಲಿ 1.60 ಲಕ್ಷ ಕೋಟಿ ರೂಪಾಯಿ ಆರ್ಥಿಕತೆಯನ್ನು ಮಂಡಿಸಿದೆ ಎಂದು ಲೇವಡಿ ಮಾಡಿದರುಅದರಲ್ಲಿ ಬರಗಾಲದಿಂದ ತತ್ತರಿಸುವ ಜಿಲ್ಲೆಗಳಿಗೆ 300 ಕೋಟಿ ರೂಪಾಯಿಗಳನ್ನು ವಿತರಿಸುವ ಸೌಜನ್ಯ ಸರಕಾರ ತೋರುತ್ತಿಲ್ಲ ಎಂದು ಕಿಡಿಕಾರಿದ್ದಾರೆ.