ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಉದ್ಯೋಗ, ಕೌಶಲ್ಯ ಅಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇತರೇ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಸರಕಾರ ಮತ್ತೊಂದು ಕ್ರಮ ಕೈಗೊಂಡಿದೆ. ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ಬ್ರಾಹ್ಮಣ ಸಮುದಾಯದವರಿಗೆ ನೀಡಲು ಸರ್ಕಾರಿ ಆದೇಶ ಹೊರಡಿಸುವ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಆರ್ಥಿಕವಾಗಿ ಹಿಂದುಳಿದ