ಬೆಂಗಳೂರು : ಮೀಸಲಾತಿ ಸಂಬಂಧಿತ ಜನರ ಹಲವು ದಶಕಗಳ ಬೇಡಿಕೆಯನ್ನು ಬಿಜೆಪಿ ಸರ್ಕಾರ ಈಡೇರಿಸಿದೆ.ಶಿಕ್ಷಣ ವಂಚಿತರು ಮತ್ತು ಸಾಮಾಜಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಮತ್ತು ಉದ್ಯೋಗಾವಕಾಶದ ಅವಕಾಶ ನೀಡಿ ಸ್ವಾವಲಂಬನೆಯ-ಸ್ವಾಭಿಮಾನಿ ಬದುಕಿಗಾಗಿ ಈ ನಿರ್ಧಾರ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ಇಂದು ಜನಸಂಕಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಹಲವಾರು ದಶಕಗಳ ಕಾಲ ಅಧಿಕಾರದಲ್ಲಿತ್ತು. ಯಾಕೆ ಮೀಸಲಾತಿ ವಿಚಾರದಲ್ಲಿ ಇಂಥ ದಿಟ್ಟ ನಿರ್ಧಾರ