ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸರ್ಕಾರ ನೀತಿ ನಿಯಮಗಳ ಪ್ರಕಾರ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಈದ್ಗಾ ಮೈದಾನ ವಿವಾದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಅದು ಕಂದಾಯ ಇಲಾಖೆ ಜಾಗ ಅಂತ ನಿರ್ಧಾರ ಆಗಿದೆ. ಕಂದಾಯ ಇಲಾಖೆ ಜಾಗ ಅಂದರೆ ಅದು ಸರ್ಕಾರದ ಜಾಗ.ಸರ್ಕಾರದ ಜಾಗದಲ್ಲಿ ಸರ್ಕಾರದ ನೀತಿ ನಿಯಮಗಳ ಪ್ರಕಾರ ಅಲ್ಲಿ ಕಾರ್ಯಕ್ರಮಗಳು ನಡೆಯುತ್ತವೆ