ರಾಜ್ಯದ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರದ ಸ್ಥಿರತೆ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಸರಕಾರ ಸುಭದ್ರವಾಗಿದೆ. ಸ್ಥಿರ ಹಾಗೂ ಸುಭದ್ರ ಆಡಳಿತ ನೀಡಲಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದಾಳತ್ವದಲ್ಲಿ ಸಮ್ಮಿಶ್ರ ಸರಕಾರ ಆಡಳಿತ ನಡೆಸಲಿದೆ ಎಂದಿದ್ದಾರೆ.ಸಿದ್ದರಾಮಯ್ಯನವರು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ನು ಅಧಿಕಾರಕ್ಕೆ ತಂದು ಮುಖ್ಯಮಂತ್ರಿ ಆಗುವುದಾಗಿ ಹೇಳಿದ್ದಾರೆ.