ಈಶ್ವರಪ್ಪ ಅವರ ರಾಜೀನಾಮೆ ಕೇಳುವುದು ಮಾತ್ರ ನಮ್ಮ ಉದ್ದೇಶವಲ್ಲ. ಈ ಸರ್ಕಾರ 40 % ಕಮಿಷನ್ ಪಡೆಯುತ್ತಿದೆ. ಹೀಗಾಗಿ ಈ ಸರ್ಕಾರವನ್ನು ಕಿತ್ತು ಬೀಸಾಕಬೇಕಿದೆ ಎಂದು ವಿಧಾನಸೌಧದಲ್ಲಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ. ಕಳೆದ ತಿಂಗಳು ನಾನೊಂದು ಸುದ್ದಿಗೋಷ್ಠಿ ಮಾಡಿದ್ದೆ. ದೇವರಾಜು ಅರಸು ನಿಗಮದಲ್ಲಿ, ಅಂಬೇಡ್ಕರ್ ನಿಗಮದಲ್ಲಿ ಬೋರ್ ವೆಲ್ಗಳನ್ನು ಕೊರೆಸುವುದರಲ್ಲಿ ಕಮಿಷನ್ ನಡೆಯುತ್ತಿದೆ ಅಂದು ಆರೋಪ ಮಾಡಿದ್ದೆ. ನಾನು ಆರೋಪಿಸಿದ ಬಳಿಕ ತನಿಖೆಗೆ ಆದೇಶ ಮಾಡಿದ್ದಾರೆ,