46 ಲಕ್ಷ ರೂ ಮೌಲ್ಯದ ಸಂಚಾರಿ ರಕ್ತಸಂಗ್ರಹಣ ವಾಹನವನ್ನು ರೋಟರಿ ಬೆಂಗಳೂರು ದಕ್ಷಿಣ ಸಂಸ್ಥೆಯು ಭಾರತೀಯ ರೆಡ್ ಕ್ರಾಸ್ ಸಂಸ್ಥೆಗೆ ದಾನವಾಗಿ ನೀಡಿದೆ. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಪಾಲ ಗೆಹ್ಲೋಟ್ ರೆಡ್ ಕ್ರಾಸ್ ಸಂಸ್ಥೆಯು ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾಗಿದೆ. ಇವರೊಂದಿಗೆ ರೋಟರಿ ಸಂಸ್ಥೆ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು. ಕೋವಿಡ್-19 ಸೋಂಕಿನ ಪರಿಣಾಮ, ಸ್ವಯಂಪ್ರೇರಿತ ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಿದ್ದ ಬಹುತೇಕ ಸಂಸ್ಥೆಗಳಲ್ಲಿ ಸ್ವಯಂಪ್ರೇರಿತ ರಕ್ತದಾನ