ಹುಬ್ಬಳ್ಳಿ: ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್ ಸಭಾಪತಿಗಳಾಗಿ ಅಧಿಕಾರ ವಹಿಸಿಕೊಂಡು 9 ತಿಂಗಳಾಗುತ್ತಾ ಬಂತು. ಆದರೆ ಇದುವರೆಗೂ ಅವರಿಗೆ ಬೆಂಗಳೂರಿನಲ್ಲಿ ಸರ್ಕಾರಿ ಬಂಗಲೆ ಅಲಾಟ್ ಆಗಿಲ್ಲ. ಬಿಜೆಪಿ ಸರ್ಕಾರದ ಧೋರಣೆಗೆ ಹೊರಟ್ಟಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಬಂಗಲೆಗಾಗಿ ಭಿಕ್ಷೆ ಬೇಡೋಕೆ ಆಗಲ್ಲ, ಕೊಟ್ಟರೆ ಕೊಡಲಿ, ಬಿಟ್ಟರೆ ಬಿಡಲಿ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಸರ್ಕಾರಿ ಮನೆ ಇನ್ನೂ ಸಿಕ್ಕಿಲ್ಲ. ರಾಜ್ಯ