ಜೈಪುರ : ಹೆಚ್ಚುತ್ತಿರುವ ಮಹಿಳಾ ದೌರ್ಜನ್ಯ ಪ್ರಕರಣಗಳಿಂದ ಪ್ರತಿಪಕ್ಷಗಳ ಟೀಕೆಗೆ ಗುರಿಯಾಗಿದ್ದ ರಾಜಸ್ಥಾನ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ರಾಜ್ಯದಲ್ಲಿ ಅತ್ಯಾಚಾರ ಆರೋಪಿಗಳು ಹಾಗೂ ಅಪರಾಧ ಕೃತ್ಯ ಹಿನ್ನೆಲೆ ಉಳ್ಳವರಿಗೆ ಸರ್ಕಾರಿ ಉದ್ಯೋಗ ನೀಡುವುದಿಲ್ಲ ಎಂದು ಘೋಷಣೆ ಮಾಡಿದೆ. ಮಹಿಳೆಯರ ವಿರುದ್ಧ ನಡೆಯುತ್ತಿರುವ ಅಪರಾಧ ಕೃತ್ಯಗಳನ್ನ ತಡೆಯಲು ಶಿಸ್ತು ಕ್ರಮದ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಬಾಲಕಿಯರು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಕ್ಕೆ ಯತ್ನ ಇತರ ಅಪರಾಧ ಕೃತ್ಯಗಳಲ್ಲಿ