ಬೆಂಗಳೂರು: ಭಾರೀ ವಿವಾದಕ್ಕೆ ಕಾರಣವಾಗಿದ್ದ, 2022ರ ರೋಹಿತ್ ಚಕ್ರತೀರ್ಥ ಸಮಿತಿಯ ಪಠ್ಯಪುಸ್ತಕ ಪರಿಷ್ಕರಣೆಯ ವಿವಾದಿತ ಪಠ್ಯಗಳನ್ನು ಸರ್ಕಾರ ಹೊಸದಾಗಿ ಪರಿಷ್ಕರಣೆ ಮಾಡಿದೆ.ಸರ್ಕಾರ ಆದೇಶದಂತೆ ಎಂಟು ಪಠ್ಯಗಳನ್ನು ಹೊಸದಾಗಿ ಪರಿಷ್ಕರಣೆ ಮಾಡಿ ಇಲಾಖೆ ವೆಬ್ಸೈಟ್ಗೆ ಅಪ್ಲೋಡ್ ಮಾಡಿದೆ.ಕನ್ನಡ ಮತ್ತು ಇಂಗ್ಲೀಷ್ ಆವೃತ್ತಿಯ 59 ಪುಟಗಳ ಪರಿಷ್ಕೃತ ಪಠ್ಯ ಬಿಡುಗಡೆ ಮಾಡಲಾಗಿದೆ. 6,7,9ನೇ ತರಗತಿಯ ಸಮಾಜ ವಿಜ್ಞಾನದ ಪಠ್ಯಗಳು, 7ನೇ ತರಗತಿಯ ಕನ್ನಡ ಭಾಷೆಯ ಪದ್ಯ ಮತ್ತು 4ನೇ ತರಗತಿಯ ಪರಿಸರ ಅಧ್ಯಯನ