ಸಾರಿಗೆ ನೌಕರರ ಸಮಸ್ಯೆಗಳನ್ನು ಬೇಗ ಪರಿಹರಿಸಿ. ಇಲ್ಲವಾದರೇ ಸಮಸ್ಯೆ ಜಟಿಲವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರಾಜ್ಯ ಸರಕಾರಕ್ಕೆ ಕಿವಿ ಮಾತು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರು ಕೈಗೊಂಡಿರುವ ರಾಜ್ಯಾದ್ಯಂತ ಮುಷ್ಕರ ಎರಡನೇಯ ದಿನಕ್ಕೆ ಕಾಲಿಟ್ಟಿದೆ. ಇದರಿಂದ ಲಕ್ಷಾಂತರ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ರಾಜ್ಯ ಸರಕಾರ ಸಾರಿಗೆ ನೌಕರರ ಸಮಸ್ಯೆಗಳನ್ನು ಬೇಗನೆ ಪರಿಹರಿಸಬೇಕು. ಇಲ್ಲವಾದರೇ ಸಮಸ್ಯೆ ಜಟಿಲವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.