ಬೆಳಗಾವಿ : ಗೋ ಹತ್ಯೆ ನಿಷೇಧ ಕಾಯ್ದೆ ಬಗ್ಗೆ ಸರ್ಕಾರದಿಂದ ಸಮೀಕ್ಷೆ ನಡೆಸುವುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಗೋ ಹತ್ಯೆ ನಿಷೇಧ ಕಾಯ್ದೆ ವಿಚಾರದ ಕುರಿತು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮನೆ-ಮನೆಗಳಿಗೆ ತೆರಳಿ ಗೋ ಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ಕುರಿತು ಸಂದರ್ಶನ ನಡೆಸುತ್ತೇವೆ.ಮನೆ ಮನೆಗೆ ಹೋಗಿ ಈ ಕಾಯ್ದೆ ಬೇಕೋ ಬೇಡವೋ ಎಂದು ಜನರನ್ನು ಕೇಳುತ್ತೇವೆ.