ಬೆಂಗಳೂರು: ಪ್ರತಿಷ್ಠಿತ ಆರ್ ಆರ್ ನಗರದಲ್ಲಿ ನಡೆದ ಗೌರಿ ಲಂಕೇಶ್ ಹತ್ಯೆ ಬೆಚ್ಚಿಬೀಳಿಸುವಂತೆ ಮಾಡಿದೆ. ಗೌರಿ ಲಂಕೇಶ್ ಹತ್ಯೆಯಾಗಿದ್ದು ಹೇಗೆ ಎಂಬುದು ಅವರ ಮನೆಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಇದನ್ನು ಪೊಲೀಸರು ಇದೀಗ ವಶಕ್ಕೆ ಪಡೆದಿದ್ದು, ದುಷ್ಕರ್ಮಿಗಳ ಬಗ್ಗೆ ಮತ್ತಷ್ಟು ಮಾಹಿತಿ ತಿಳಿದುಕೊಳ್ಳುತ್ತಿದ್ದಾರೆ. ಅವರ ಚಹರೆಯನ್ನು ಅಂದಾಜಿಸಿ ರೇಖಾಚಿತ್ರ ಬರೆಯುವ ಕೆಲಸವೂ ನಡೆಯುತ್ತಿದೆ ಎನ್ನಲಾಗಿದೆ. ಅಲ್ಲದೆ ಸಿಸಿಟಿವಿ ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷ್ಯವಾಗಲಿದ್ದು, ಒಂದು ಮೂಲಗಳ ಪ್ರಕಾರ ದುಷ್ಕರ್ಮಿಗಳು ಬಳಸಿದ್ದ