ಉದ್ದೇಶಿತ ಮುಂಬೈ-ಚೆನ್ನೈ ಗ್ರೀನ್ ಕಾರಿಡಾರ್ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಯೋಜಿಸಿದೆ. ಈ ಹೆದ್ದಾರಿ ಕಲಬುರಗಿ ಮತ್ತು ಯಾದಗಿರಿ ನಗರಗಳಿಗೆ ಹೊಂದಿಕೊಂಡು ಹಾಯ್ದು ಹೋಗಿದಲ್ಲಿ ಈ ನಗರಗಳ ಬೆಳವಣಿಗೆಗೆ ಸಹಾಯಕವಾಗಲಿದೆ ಎಂದು ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷರು ಹಾಗೂ ಕಲಬುರಗಿ ಸಂಸದ ಡಾ.ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಕಲಬುರಗಿಯ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.