ಬೆಂಗಳೂರು : ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯದ ಬಲವರ್ಧನೆಗಾಗಿ ಹೊಸ ಮೆಡಿಕಲ್ ಕಾಲೇಜುಗಳನ್ನು ಆರಂಭಿಸುವ ಕಾರ್ಯದಲ್ಲಿ ಇನ್ನಷ್ಟು ಪ್ರಗತಿ ಕಂಡುಬಂದಿದ್ದು, ಈಗ 500 ಕೋಟಿ ರೂ. ವೆಚ್ಚದ ಚಿತ್ರದುರ್ಗ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ಈ ಮಹತ್ವದ ಹೆಜ್ಜೆಯಿಂದಾಗಿ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಕಾರ್ಯಕ್ಕೆ ಮತ್ತಷ್ಟು ಆದ್ಯತೆ ದೊರೆತಿದೆ ಎಂದು