ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ 2000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನಲ್ಲಿ ಚಾಲನೆ ನೀಡಲಾಗಿತ್ತು.ಈ ವೇಳೆ ನಾಡದೇವತೆ ಚಾಮುಂಡೇಶ್ವರಿ ದೇವಿಗೆ 2000 ರೂ. ಅರ್ಪಿಸಲಾಗಿತ್ತು. ಇದೀಗ, ಪ್ರತಿ ತಿಂಗಳು ದೇವಸ್ಥಾನಕ್ಕೆ ಯೋಜನೆಯ ಹಣ ನೀಡುವಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಎಂಎಲ್ಸಿ ದಿನೇಶ್ ಗೂಳಿಗೌಡ ಪತ್ರ ಬರೆದಿದ್ದು, ಕಾಂಗ್ರೆಸ್ ಸರ್ಕಾರ ಅಸ್ತು ಎಂದಿದೆ.ದಿನೇಶ್ ಗೂಳಿಗೌಡ