ಬೆಂಗಳೂರು : ಗೃಹಲಕ್ಷ್ಮಿ ಯೋಜನೆಗೆ ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಯೋಜನೆಗೆ ಅಧಿಕೃತ ಚಾಲನೆ ಸಿಕ್ಕ ಬಳಿಕ ಒಂದು ವಾರದಲ್ಲೇ 70 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಹೆಸರು ನೋಂದಾಯಿಸಿದ್ದಾರೆ. ಆರಂಭದಲ್ಲಿ ಫಲಾನುಭವಿಗಳು ತಮ್ಮ ಮೊಬೈಲ್ಗೆ ಸಂದೇಶ ಬಂದ ನಂತರ ನೋಂದಣಿ ಕೇಂದ್ರಗಳಿಗೆ ಹೋಗಿ ನೋಂದಾಯಿಸಿಕೊಳ್ಳಬೇಕಿತ್ತು. ಈಗ ನೋಂದಣಿ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸಲಾಗಿದೆ. ಮೊಬೈಲ್ಗೆ ಮೆಸೇಜ್ ಬರದೇ ಇದ್ದರೂ ಅರ್ಹ ಫಲಾನುಭವಿಗಳು ಇನ್ಮುಂದೆ ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ನೋಂದಣಿ ಕೇಂದ್ರದಲ್ಲಿ