ರಾಯಚೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ನಾನಾ ತಾಂತ್ರಿಕ ಸಮಸ್ಯೆಗಳು ಎದುರಾಗಿವೆ. ಹೀಗಾಗಿ ರಾಯಚೂರಿನಲ್ಲಿ ಮಹಿಳೆಯರು ಹಾಗೂ ಸಾರ್ವಜನಿಕರು ಪರದಾಟ ನಡೆಸಿದ್ದಾರೆ. ಬೆಳಗ್ಗೆಯಿಂದ ಸಂಜೆಯವರೆಗೆ ಕಾದು ನಿಂತರೂ ನೋಂದಣಿ ಮಾಡಿಸಲು ಆಗದೆ ಮಹಿಳೆಯರು ಮನೆಗಳಿಗೆ ಮರಳಿದ್ದಾರೆ. ಇಲ್ಲಿನ ಕರ್ನಾಟಕ ಒನ್ ಸೇರಿದಂತೆ ನೋಂದಣಿ ಕೇಂದ್ರಗಳಲ್ಲಿ ಸರ್ವರ್ ಸಮಸ್ಯೆಯ ಜೊತೆಗೆ ಪಡಿತರ ಚೀಟಿ ಕೆವೈಸಿ ಸಮಸ್ಯೆ, ಮನೆ ಯಜಮಾನಿ ಮೊಬೈಲ್ ಸಂಖ್ಯೆ ಜೋಡಣೆ, ಒಟಿಪಿ