ಚಾಮುಂಡೇಶ್ವರಿ ಕ್ಷೇತ್ರದಿಂದ ಹಿರಿಯ ಜೆಡಿಎಸ್ ಮುಖಂಡ ಜಿ.ಟಿ. ದೇವೇಗೌಡ ಕಣಕ್ಕೆ ಇಳಿಯವುದು ಖಚಿತ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದಿಂದ ಜಿ.ಟಿ.ದೇವೇಗೌಡ ಕಣಕ್ಕಿಳಿಯಲಿದ್ದು, ಹುಣಸೂರು ಕ್ಷೇತ್ರದಿಂದ ಎಚ್.ವಿಶ್ವನಾಥ್ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಹುಣಸೂರು ಕ್ಷೇತ್ರದಿಂದ ಬೇರೆಯವರಿಗೆ ಟಿಕೆಟ್ ನೀಡಲಾಗುತ್ತಿದೆ ಎನ್ನುವ ವದಂತಿಗಳಲ್ಲಿ ಸತ್ಯಾಂಶವಿಲ್ಲ. ಹಿರಿಯ ಮುಖಂಡರಾದ ವಿಶ್ವನಾಥ್ ಸ್ಪರ್ಧೆಯಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ರಾಜ್ಯದ 224 ವಿಧಾನಸಭಾ