ಮೈಸೂರು : ಮತ್ತೆ ಮಾಜಿ ಸಚಿವ ಜಿ.ಟಿ ದೇವೇಗೌಡ ಅವರು ಪ್ರಧಾನಿ ಮೋದಿ ಅವರನ್ನು ದೇಶದ ಮಹಾನ್ ವ್ಯಕ್ತಿ ಎಂದು ಹಾಡಿಹೊಗಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಈ ದೇಶಕ್ಕೆ ಬೇಕು ಎಂದು ನಾನು ಮೊದಲೇ ಹೇಳಿದ್ದೆ. ಅವರು ದೇಶದ ವ್ಯಕ್ತಿ ಹಾಗೂ ದೇಶದ ರಕ್ಷಣೆ ಮಾಡುತ್ತಿದ್ದಾರೆ. ಮೋದಿ ಅವರು ಕಾಶ್ಮೀರ ಸಮಸ್ಯೆಯನ್ನು ಯಾವ ರೀತಿ ಮಾಡುತ್ತಿದ್ದಾರೆ ಎಂಬುದನ್ನು ನೋಡಿದ್ದೀರಿ. ಅವರು ದೇಶದ ಅಭಿವೃದ್ಧಿಯತ್ತ ನೋಡುತ್ತಿದ್ದಾರೆ.