ರಾಜ್ಯದ ಶಾಲೆಗಳಲ್ಲಿನ ಮಧ್ಯಾಹ್ನದ ಬಿಸಿಯೂಟ ತಯಾರಿಕೆಯ ಅಡುಗೆ ಸಿಬ್ಬಂದಿಗಳಿಗೆ ಏಪ್ರಾನ್, ತಲೆಗವಸು, ಕೈಗವರು ಧರಿಸಲು ಶಿಕ್ಷಣ ಇಲಾಖೆ ಸೂಚಿಸಿದೆ. ಶಿಕ್ಷಣ ಇಲಾಖೆಯಿಂದ ಮಧ್ಯಾಹ್ನದ ಬಿಸಿಯೂಟದಲ್ಲಿ ನೈರ್ಮಲ್ಯ, ಸ್ವಚ್ಛತೆ, ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಬಿಸಿಯೂಟ ಸಿಬ್ಬಂದಿಯು ಪಾಲಿಸಬೇಕಾದ ನಿಯಮಗಳ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ.ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ಪ್ರಕಟಿಸಿರುವಂತ ಮಾರ್ಗಸೂಚಿಯಲ್ಲಿ ಅಡುಗೆ ಸಿಬ್ಬಂದಿ ಏಪ್ರಾನ್,ತಲೆಗವಸು ಮತ್ತು ಕೈಗವಸುಗಳನ್ನು ಧರಿಸಬೇಕು.ಇದಲ್ಲದೇ ಅಡುಗೆ ಕೋಣೆ ಸ್ವಚ್ಛ ಹಾಗೂ ಧೂಳು ರಹಿತವಾಗಿ ಇರುವಂತೆ