ಗುಲಬರ್ಗಾ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಡಿಸೆಂಬರ್ 9ರಂದು ಜರುಗುವ ಗುಲಬರ್ಗಾ ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ಒಟ್ಟು 157 ಚಿನ್ನದ ಪದಕಗಳ ಪೈಕಿ 151 ಚಿನ್ನದ ಪದಕಗಳನ್ನು 84 ವಿದ್ಯಾರ್ಥಿಗಳಿಗೆ, 6 ಚಿನ್ನದ ಪದಕಗಳನ್ನು ನಗದು ಬಹುಮಾನ ರೂಪದಲ್ಲಿ ಪರಿವರ್ತಿಸಿ 8 ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಸ್. ಆರ್. ನಿರಂಜನ್ ಹೇಳಿದರು. ಅವರು ಗುರುವಾರ ವಿಶ್ವವಿದ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕನ್ನಡ ವಿಭಾಗದ