ಬೆಂಗಳೂರು : ನೆರೆಯ ರಾಜ್ಯ ಕೇರಳದಲ್ಲಿ ನಿಫಾ ವೈರಸ್ನಿಂದಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ರೋಗದ ಭೀತಿ ಹುಟ್ಟಿಕೊಂಡಿದ್ದು, ಅದು ಹರಡದಂತೆ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಕರ್ನಾಟಕದ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.1. ನಿಫಾ ವೈರಸ್ ನಿಂದ ಉಂಟಾಗಬಹುದಾದ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದ ಕೇರಳ ಗಡಿ ಪ್ರದೇಶಗಳಲ್ಲಿ ಎಚ್ಚರಿಕೆ ಮತ್ತು ಜಾಗರೂಕತೆ