ಮಾಧ್ಯಮಗಳಲ್ಲಿ ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ ಎಂದು ಎಷ್ಟೇ ಮನವಿ ಮಾಡಿದ್ರೂ ಸಹ ಜನರು ಮಾತ್ರ ಎಚ್ಚೆತ್ತಂತೆ ಕಾಣುತ್ತಿಲ್ಲ. ಅಪರಿಚಿತರನ್ನ ಕಂಡು ಮಕ್ಕಳ ಕಳ್ಳರೆಂದು ಭಾವಿಸಿ ಸುಖಾಸುಮ್ಮನೆ ಗೂಸಾ ನೀಡ್ತಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದಲ್ಲಿ ಮಕ್ಕಳ ಕಳ್ಳರೆಂದು ಭಾವಿಸಿ ಯುವಕನನ್ನು ಗ್ರಾಮಸ್ಥರು ಥಳಿಸಿದ್ದಾರೆ. ಮಕ್ಕಳ ಕಳ್ಳರೆಂಬ ಸುಳ್ಳು ವದಂತಿ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಬಂದ ಅಪರಿಚಿತ ವ್ಯಕ್ತಿಯನ್ನು ಗ್ರಾಮಸ್ಥರು ಥಳಿಸಿದ್ದಾರೆ. ಪೂಜಾರ ವಸತಿ ಬಳಿ ಬಂದಿದ್ದ ಅಪರಿಚಿತ ಯುವಕನನ್ನು