ಬೆಂಗಳೂರು: ದೆಹಲಿ ಮೂಲದ ಮಹಿಳಾ ಟೆಕ್ಕಿ ವಿಜಯಲಕ್ಷ್ಮಿ (23) ಅವರನ್ನು ಕೊಲೆ ಮಾಡಿ ಪರಾರಿ ಆಗಿದ್ದ ಹರೀಶ್ ಅನ್ನು ಪೊಲೀಸರು ದೆಹಲಿಯಲ್ಲಿ ಬಂಧಿಸಿದ್ದಾರೆ. ದೆಹಲಿ ಮೂಲದವರೇ ಆಗಿದ್ದ ವಿಜಯಲಕ್ಷ್ಮಿ ಮೂರು ತಿಂಗಳ ಹಿಂದೆ ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದರು.ದೆಹಲಿಯಲ್ಲೆ ಪರಿಚಯವಾಗಿದ್ದ ಗೆಳೆಯ ಹರೀಶ್ಕುಮಾರ್ ಆ. 15 ರಂದು ಗೆಳತಿಯನ್ನು ಮಾತಾಡಿಸುವ ನೆಪದಲ್ಲಿ ಬೆಂಗಳೂರಿಗೆ ಬಂದು ಕೊಲೆ ಮಾಡಿ ಪರಾರಿ ಆಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಿಜಯಲಕ್ಷ್ಮಿ ದೆಹಲಿಯಲ್ಲಿದ್ದಾಗಲೇ