ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಯಾವುದೇ ಭೂ ಅಕ್ರಮದಲ್ಲಿ ಭಾಗಿಯಾಗಿಲ್ಲ ಎಂದು ಸಚಿವ ಎಚ್.ಸಿ, ಮಹಾದೇವಪ್ಪ ಯತೀಂದ್ರ ಪರ ಬ್ಯಾಟಿಂಗ್ ನಡೆಸಿದ್ದಾರೆ. ಬಿಜೆಪಿ ಮುಖಂಡ ಬಿ.ಜಿ.ಪುಟ್ಟಸ್ವಾಮಿ ಮಾಡಿರುವ ಆರೋಪದಲ್ಲಿ ಸತ್ಯಾಂಶವಿಲ್ಲ. ಸಮಯ ಸಾಧಕ ರಾಜಕಾರಣಿಗಳಿಗೆ ಜನತೆ ಮುಂಬರುವ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ತಿರುಗೇಟು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ವೈದ್ಯರಾಗಿದ್ದಾರೆ. ಅವರಿಗೆ ಸಾರ್ವಜನಿಕ ಜೀವನ ಇಷ್ಟವಿರಲಿಲ್ಲ. ಕೆಲ ಕಾರಣಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ ಎಂದು