ಬೆಂಗಳೂರು : ಇತ್ತೀಚೆಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಜಮೀರ್ ಅಹಮದ್ ಖಾನ್ ಅವರನ್ನು ಸೋಲಿಸಲು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಹೊಸ ತಂತ್ರವೊಂದನ್ನು ರೂಪಿಸಿದ್ದಾರೆ. ಕಾಂಗ್ರೆಸ್ ಸೇರಿದ ಜಮೀರ್ ಅಹಮದ್ ಅವರಿಗೆ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಖಚಿತವಾಗಿರುವ ಹಿನ್ನಲೆಯಲ್ಲಿ ಅವರನ್ನು ತವರು ಕ್ಷೇತ್ರದಲ್ಲಿ ಸೋಲಿಸಲು ದೇವೇಗೌಡರು ನಿರ್ಧಾರ ಮಾಡಿದ್ದಾರೆ. ಕಳೆದ 25 ವರ್ಷಗಳಿಂದ ಚಾಮರಾಜಪೇಟೆಯ ಕಾಂಗ್ರೆಸ್ ಸಕ್ರಿಯ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದ ಮುಖಂಡ ಬಿ.ಕೆ.ಅಲ್ತಾಪ್ ರನ್ನು ಜೆಡಿಎಸ್ ನತ್ತ