ಯಾದಗಿರಿ : ಚುನಾವಣೆಯಲ್ಲಿ ಜೆಡಿಎಸ್ ಸ್ಪಷ್ಟ ನಿಲುವು ಹೊಂದಿಲ್ಲ ಎಂದು ರಾಹುಲ್ ಗಾಂಧಿ ಅವರು ಟೀಕಿಸಿದ್ದಕ್ಕೆ ಕೋಪಗೊಂಡ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, ಚುನಾವಣೆಯಲ್ಲಿ ಜೆಡಿಎಸ್ ಸ್ಪಷ್ಟ ನಿಲುವು ಹೊಂದಿಲ್ಲ ಎಂದು ರಾಹುಲ್ ಟೀಕಿಸಿದ್ದಾರೆ. ನನ್ನ ಪಕ್ಷವನ್ನು ಟೀಕಿಸಲು ಅವರಿಗೇನು ಅಧಿಕಾರ ಇದೆ. ರಾಹುಲ್ ಗಾಂಧಿ ಕೇಳಿದ್ದಕ್ಕೆಲ್ಲ ಉತ್ತರಿಸಲು ನಾನೇನು ಅವರ ಗುಲಾಮನಲ್ಲ. ನಾನು ಈ