ನಾನು ಪ್ರಚಾರದ ವೇಳೆ ನಗರ ಹಾಗೂ ಗ್ರಾಮಾಂತರ ಪ್ರದೇಶ ಸುತ್ತಿನೋಡಿದಾಗ ಎಲ್ಲವೂ ನನ್ನ ಗಮನಕ್ಕೆ ಬಂದಿದೆ, ಈ ಭಾಗದ ಶಾಸಕರಾದ ಯೋಗೇಶ್ವರ್ ಅವರು ಕ್ಷೇತ್ರದ ಅಭಿವೃದ್ಧಿಗಿಂತ ತಮ್ಮ ಅಭಿವೃದ್ಧಿಯಾಗಿದ್ದಾರೆಂದು ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಎಂ.ರೇವಣ್ಣ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ರು, ಚನ್ನಪಟ್ಟಣ ನಗರದ ತಮ್ಮ ಸ್ವಗೃಹದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಯೋಗೇಶ್ವರ್ ಹಾಗೂ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು. ಯೋಗೇಶ್ವರ್ ಚುನಾವಣಾ ಪ್ರಚಾರಕ್ಕೆ ಹೋದಾಗ ಕ್ಷೇತ್ರದ ಹಲವು ಗ್ರಾಮಗಳಲ್ಲಿ ಜನರು ಘೇರಾವ್ ಹಾಕಿದ್ದಾರೆ.