ಇತ್ತೀಚೆಗೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಎಚ್. ವಿಶ್ವನಾಥ್ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಲಿದ್ದಾರೆ ಎಂದು ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಘೋಷಿಸಿದ್ದಾರೆ. ಮೈಸೂರಿನ ಸಾ.ರಾ ಸಭಾಂಗಣದಲ್ಲಿ ನಡೆದ ಜೆಡಿಎಸ್ ಪಕ್ಷದ ಸೇರ್ಪಡೆ ಸಮಾವೇಶದಲ್ಲಿ ಮಾತನಾಡಿದ ಜಿ.ಟಿ ದೇವೇಗೌಡರು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿಯಾಗಿಸಲು ಕ್ಷೇತ್ರವನ್ನು ತ್ಯಾಗ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಜೆಡಿಎಸ್ಗಾಗಿ, ಕುಮಾರಣ್ಣನಿಗಾಗಿ, ದೇವೇಗೌಡರಿಗಾಗಿ ನಾನು ಮತ್ತು ನನ್ನ ಪುತ್ರ