ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷಎಚ್.ಡಿ.ಕುಮಾರಸ್ವಾಮಿಯವರನ್ನು ಇಂದು ಮಾಜಿ ಸಂಸದ ಎಚ್.ವಿಶ್ವನಾಥ್ ಭೇಟಿ ಮಾಡಿ ಚರ್ಚಿಸಿರುವುದು ತೀವ್ರ ಕುತೂಹಲ ಕೆರಳಿಸಿದೆ. ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿ ಚುಂಚನಗಿರಿ ಮಠದಲ್ಲಿ ಅಮಾವಾಸ್ಯೆ ಪೂಜೆಗಾಗಿ ಬಂದಿದ್ದ ಕುಮಾರಸ್ವಾಮಿಯವರನ್ನು ವಿಶ್ವನಾಥ್ ಭೇಟಿ ಮಾಡಿದರು. ಉಭಯ ನಾಯಕರು ಶ್ರೀಗಳ ಆಶೀರ್ವಾದ ಪಡೆದು ಕೆಲ ಕಾಲ ಚರ್ಚೆ ನಡೆಸಿ ತೆರಳಿದರು ಎಂದು ಮೂಲಗಳು ತಿಳಿಸಿವೆ. ಮಾಜಿ ಸಂಸದ ಎಚ್.ವಿಶ್ವನಾಥ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರಿಂದ, ಜೆಡಿಎಸ್