ಕೊನೆಗೂ ಹಿರಿಯ ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಲು ಸಜ್ಜಾಗಿದ್ದಾರೆ. ನಾಳೆ ಖಾಸಗಿ ಹೋಟೆಲ್ನಲ್ಲಿ ಬೆಂಬಲಿಗರು, ಹಿತೈಷಿಗಳ ಸಭೆ ಕರೆದಿರುವ ಎಚ್.ವಿಶ್ವನಾಥ್, ಸಭೆಯಲ್ಲಿಯೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಬಗ್ಗೆ ಘೋಷಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಐಸಿಸಿ ಮುಖಂಡರ ವರ್ತನೆಯಿಂದ ಬೇಸತ್ತಿರುವ ಅವರು, ಕಾಂಗ್ರೆಸ್ ಪಕ್ಷವನ್ನು ತೊರೆಯಲಿದ್ದಾರೆ. ಯಾವ ಪಕ್ಷ ಸೇರುತ್ತಾರೆ ಎನ್ನುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲವಾದರೂ