ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿಯವರನ್ನು ಭೇಟಿ ಮಾಡಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.ವಿಶ್ವನಾಥ್ ಮತ್ತು ತಾವು ಅವರು ಕಳೆದ ನಲವತ್ತು ವರ್ಷಗಳಿಂದ ಸ್ನೇಹಿತರು. ನಮ್ಮ ಮನೆಗೆ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಎಲ್ಲ ಪಕ್ಷದವರು ಬರುತ್ತಾರೆ. ಅದರಲ್ಲಿ ವಿಶೇಷ ಏನಿಲ್ಲ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ನಗರದ ಲಕ್ಕಸಂದ್ರದ ತಮ್ಮ ನಿವಾಸದಲ್ಲಿ ಇಂದು ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಭೇಟಿಯಾದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ