Widgets Magazine

ಯಾರಿಗೆ ಬೇಕು ನಿಗಮ ಮಂಡಳಿ ಅಧ್ಯಕ್ಷ ಸ್ಥಾನ? ಸಿಎಂಗೆ ಬಿಗ್ ಶಾಕ್ ನೀಡಿದ ಹೆಚ್.ವಿಶ್ವನಾಥ್

ಮೈಸೂರು| Jagadeesh| Last Modified ಭಾನುವಾರ, 9 ಫೆಬ್ರವರಿ 2020 (16:16 IST)
ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಗದೇ ಮುನಿಸಿಕೊಂಡಿರೋ ಹೆಚ್.ವಿಶ್ವನಾಥ್ ಮತ್ತೆ ಸಿಎಂ ಬಿ.ಎಸ್.ಯಡಿಯೂರಪ್ಪರ ವಿರುದ್ಧ ಪರೋಕ್ಷವಾಗಿ ಅಸಮಧಾನ ಹೊರಹಾಕಿದ್ದಾರೆ.

ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳನ್ನು ಶೀಘ್ರದಲ್ಲೇ ನೇಮಕ ಮಾಡ್ತೇವೆ ಅಂತ ಸಿಎಂ ಯಡಿಯೂರಪ್ಪ ಹೇಳಿರೋ ಬೆನ್ನಲ್ಲೇ, ಯಾರಿಗೆ ಬೇಕು ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಅಂತ ಹೆಚ್.ವಿಶ್ವನಾಥ್ ಹೊಸ ಬಾಂಬ್ ಸಿಡಿಸಿದ್ದಾರೆ.

ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬೇಡವೇ ಬೇಡ ಅಂದಿರೋ ಹೆಚ್.ವಿಶ್ವನಾಥ್, ನಾನು ಹಾಗೂ ಮಾಜಿ ಸಚಿವ ಎಂಟಿಬಿ ನಾಗರಾಜ್ ಸಚಿವರಾಗಿ ಕೆಲಸ ಮಾಡಿದ್ದೇವೆ.

ಪಕ್ಷದ ಹೊಸಬರಿಗೆ ಹಾಗೂ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಡಲಿ. ಆದರೆ ನನಗಂತೂ ಬೇಡವೇ ಬೇಡ ಅಂತ ಕಡ್ಡಿ ತುಂಡು ಮಾಡಿದಂತೆ ಹೇಳಿದ್ದಾರೆ.

ಇದು ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮುಂದಿನ ದಿನಗಳಲ್ಲಿ ಇನ್ಯಾವ ರೀತಿ ಸಮಸ್ಯೆ ತಂದೊಡ್ಡುತ್ತಾ ಅನ್ನೋ ಚರ್ಚೆ ಶುರುವಾಗಿದೆ.


ಇದರಲ್ಲಿ ಇನ್ನಷ್ಟು ಓದಿ :