ಮಹಾರಾಷ್ಟ್ರದಿಂದ ಬಂದು ರಾಜ್ಯದಲ್ಲಿ ಕಳ್ಳತನ ಮಾಡಿ ತಲೆ ಮರೆಸಿಕೊಳ್ಳುತ್ತಿದ್ದ ಖತರ್ನಾಕ್ ಕಳ್ಳರ ಗುಂಪನ್ನು ಪೊಲೀಸರು ಬಂಧನ ಮಾಡಿದ್ದಾರೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ಜಿಲ್ಲೆಯ ಬಳ್ಳಾರಿ ಮತ್ತು ಹೊಸಪೇಟೆ ನಗರದಲ್ಲಿನ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊಸಪೇಟೆ ಉಪವಿಭಾಗದ ಪೊಲೀಸ್ ಅಧಿಕಾರಿಗಳು ಮೂವರು ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ 1.680 ಕೆಜಿ ಚಿನ್ನ ಮತ್ತು 15.33 ಕೆಜಿ ಬೆಳ್ಳಿ ಸೇರಿ ಒಟ್ಟು 71.09 ಲಕ್ಷ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಸಿ.ಕೆ.ಬಾಬಾ