ಜಗತ್ತು 2022ನೇ ವರ್ಷವನ್ನು ಪೂರ್ಣಗೊಳಿಸಿ ಇಂದು 2023ನೇ ಇಸವಿಗೆ ಕಾಲಿಟ್ಟಿದೆ. ದೇಶದೆಲ್ಲೆಡೆ ಕಳೆದ ಮಧ್ಯರಾತ್ರಿಯಿಂದಲೇ ಭರ್ಜರಿ ಡ್ಯಾನ್ಸ್-ಪಾರ್ಟಿಗಳೊಂದಿಗೆ ಅತ್ಯಂತ ಸಂಭ್ರಮ ಮತ್ತು ಸಡಗರದಿಂದ ಹೊಸ ವರ್ಷವನ್ನು ಬರಮಾಡಿಕೊಳ್ಳಲಾಗಿದೆ. ದೇಶದ ಜನತೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿ, ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಹೊಸ