ದಾವಣಗೆರೆ ಜಿಲ್ಲೆಯಲ್ಲಿದ್ದ ಹರಪನಹಳ್ಳಿ ತಾಲೂಕನ್ನು ಅಧಿಕೃತ ವಾಗಿ ಬಳ್ಳಾರಿ ಜಿಲ್ಲೆಗೆ ಸೇರ್ಪಡೆ ಮಾಡಲಾಗಿದೆ.ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದ್ದು, ಹರಪನಹಳ್ಳಿ ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದ ರಾಜ್ಯ ಸರ್ಕಾರ, ಬಳ್ಳಾರಿ ಜಿಲ್ಲೆಗೆ ಸೇರ್ಪಡೆ ಮಾಡಿ ರಾಜ್ಯ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. 1997 ರಿಂದ ಹರಪನಹಳ್ಳಿ ತಾಲೂಕು ದಾವಣಗೆರೆ ಭಾಗವಾಗಿತ್ತು.ಹೈದ್ರಾಬಾದ್ ಕರ್ನಾಟಕ ವಿಶೇಷ ಸ್ಥಾನಮಾನದಿಂದ ವಂಚಿತರಾಗಿದ್ದ ಹರಪನಹಳ್ಳಿ ತಾಲೂಕಿನ ಜನತೆ, ಬಳ್ಳಾರಿ ಜಿಲ್ಲೆಗೆ ಸೇರ್ಪಡೆಗೆ ಹೋರಾಟ