ಬೆಂಗಳೂರು : ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪೂರೈಕೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ನಾರಾಯಣಸ್ವಾಮಿ ವಿಷಯ ಪ್ರಸ್ತಾಪ ಮಾಡಿದರು. ಅಂಗನವಾಡಿ ಕೇಂದ್ರಗಳಲ್ಲಿ ಆಹಾರ ಪದಾರ್ಥಗಳ ಕಳಪೆ ಗುಣಮಟ್ಟದ ಪೂರೈಕೆಯಲ್ಲಿ ಆಗುತ್ತಿದೆ. ಇದೊಂದು ದೊಡ್ಡ ಮಾಫಿಯಾ ಇದೆ. ಇದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಕೂಡಲೇ ಇಂತಹ