ಹಾಸನ : ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಟಿಕೆಟ್ ಆಕಾಂಕ್ಷಿಗಳು ಮತ್ತು ಈಗಾಗಲೇ ಟಿಕೆಟ್ ಖಾತ್ರಿಯಾಗಿರುವವರು ಪ್ರಚಾರ ಬಿರುಸುಗೊಳಿಸುವ ಮೂಲಕ ಮತ ಬೇಟೆಯಲ್ಲಿ ತೊಡಗಿದ್ದಾರೆ.ಮತ್ತೊಂದೆಡೆ ಪಕ್ಷಾಂತರ ಪರ್ವ ಸಹ ಜೋರಾಗಿದೆ. ಹಾಸನ ಜಿಲ್ಲೆಯ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ವಿಚಾರದಿಂದ ಗೊಂದಲಕ್ಕೀಡಾದ ಕಾರ್ಯಕರ್ತರು ಜೆಡಿಎಸ್ ಪಕ್ಷ ತೊರೆಯಲು ಮುಂದಾಗಿದ್ದಾರೆ.ಹಾಸನ ಜಿಲ್ಲೆಯ ಜೆಡಿಎಸ್ನಲ್ಲಿ ದಿನಕ್ಕೊಂದು ಬೆಳವಣಿಗೆಯಾಗುತ್ತಲೇ ಇದೆ. ಕೆಲ ದಿನಗಳ ಹಿಂದಷ್ಟೇ ಮಾಜಿ ಸಚಿವ ಎ.ಮಂಜು ಜೆಡಿಎಸ್ ಸೇರುವುದು ಪಕ್ಕಾ ಆಗಿದೆ.ಅದಾದ ಮೇಲೆ